Share this news

ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ನೇಸರ ವಾರ್ಷಿಕಾಂಕ ಅನಾವರಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಶನಿವಾರ ನಡೆಯಿತು.

ಲೆಕ್ಕ ಪರಿಶೋಧಕ ಹಾಗೂ ಎಸ್ ‌ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಕಾರ್ಕಳ ಕಮಲಾಕ್ಷ ಕಾಮತ್ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.ಎಸ್ ‌ವಿ ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಗೆ 8ನೇ ತರಗತಿಗೆ ನೂತನವಾಗಿ ಸೇರಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಮಲಾಕ್ಷ ಕಾಮತ್ ಅವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು.

ಎಸ್.ವಿ.ಟಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆಗೈದ 10 ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಕಲಾ ವಿಭಾಗದ 07 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 13 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 30 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಅಧ್ಯಾಪಕ ದೇವದಾಸ್ ಕೆರೆಮನೆ ಅಭಿನಂದನಾ ಮಾತುಗಳನ್ನಾಡಿದರು.

ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಐ ರವೀಂದ್ರನಾಥ್ ಪೈ ಅವರು ನೇಸರ ವಾರ್ಷಿಕಾಂಕವನ್ನು ಅನಾವರಣಗೊಳಿಸಿ ಶುಭ ಹಾರೈಸಿದರು.

ಇದೇ ವೇದಿಕೆಯಲ್ಲಿ ಪ್ರಭಾ ವಿ ಶೆಣೈ ಕಾರ್ಕಳ ಇವರ ಪ್ರಾಯೋಜಕತ್ವದಲ್ಲಿ ನೀಡಲಾದ
ಉಚಿತ ನೋಟ್ಸ್ ಪುಸ್ತಕದ ವಿತರಣೆಯನ್ನು ನೂತನವಾಗಿ ಪ್ರಥಮ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮದಾಸ್ ಪ್ರಭು, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಆರತಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಅಮೃತಾ ಸ್ವಾಗತಿಸಿದರು. ಉಪಾಧ್ಯಕ್ಷ ಸನ್ವಿತ್ ವಂದಿಸಿದರು.ಉಪನ್ಯಾಸಕ ನೇಮಿರಾಜ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

                        

                          

                        

                          

 

 

Leave a Reply

Your email address will not be published. Required fields are marked *