Share this news
ಕಾರ್ಕಳ:ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಜ್ಯ ಕಾಂಗ್ರೆಸ್ ಸರ್ಕಾರವು ಬಡವರಿಗೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳ ಮೂಲಕ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಅವರು ಕಾರ್ಕಳ ತಾಲೂಕು ಪಂಚಾಯತ್ ಕಚೇರಿಯಲ್ಲಿ ನೂತನ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟಿಸಿ ಮಾತನಾಡಿ,ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಡವರು ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದ್ದು ಕಾಂಗ್ರೆಸ್ ಪಕ್ಷವು ಸದಾ ಬಡವರ ಪರವಾಗಿ ಕೆಲಸ ನಿರ್ವಹಿಸಲಿದೆ ಎಂದರು.
ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷಉದಯ ಶೆಟ್ಟಿ ಮಾತನಾಡಿ,ಬಡವರ ಪರವಾದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕಿದೆ. ಜನರ ನಿರೀಕ್ಷೆ‌ ಹುಸಿ ಮಾಡದೇ ಜನಪ್ರತಿನಿಧಿಗಳು,ಅಧಿಕಾರಿಗಳು ಕೆಲಸ ಮಾಡಬೇಕು.ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ.ರಾಜ್ಯದಲ್ಲಿ 90 % ಜನ ಬಡವರಾಗಿದ್ದಾರೆ. ಈ ವರ್ಗವನ್ನು ಮೇಲಕ್ಕೆತ್ತಬೇಕು.ಈ ಯೋಜನೆಯಲ್ಲಿ ಪ್ರಚಾರ ಬೇಡ ಯೋಜನೆಗಳು‌ ಬಡವರಿಗೆ ತಲುಪಿದರೆ ಸಾಕು,ಇದರ ಜತೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಹಾಗೂ ಉಚಿತ ಶಿಕ್ಷಣ ಸಿಕ್ಕರೆ 90% ಜನರ ಸಮಸ್ಯೆ ಪರಿಹಾರವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದ ಫಲಾನುಭವಿಗಳ ಪಟ್ಟಿಯ ಮಾಹಿತಿಯನ್ನು ಸಭೆಯ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ  ಅಜಿತ್ ಹೆಗ್ಡೆ ಮಾಳ, ಕುಕ್ಕುಂದೂರು ಪಂಚಾಯತ್ ಅಧ್ಯಕ್ಷೆ ಉಷಾ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಶಶಿಧರ್, ಕಾರ್ಕಳ ತಹಶಿಲ್ದಾರ್ ಪ್ರದೀಪ್, ಆರ್, ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ರೂಪಾ,ಟಿ ಶೆಟ್ಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕೃಷ್ಣಾನಂದ,ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ  ಮುಂತಾದವರು ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *