Share this news

ಕಾರ್ಕಳ:ಪ್ರತೀ ಗ್ರಾಮದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘ ರಚನೆಗೆ ಸರ್ಕಾರ ನಿರ್ಧರಿಸಲಿದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ ಹೇಳಿದರು.

ಅವರು ಜು.31 ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಯಾವ ಫಲಾನುಭವಿಯೂ ಕೂಡ ಸರ್ಕಾರದ ಯೋಜನೆಗಳಿಂದ ವಂಚಿತರಾಗಬಾರದು. ಇ ಕೆವೈಸಿ ಸಮಸ್ಯೆಯಿಂದ ಹಲವರಿಗೆ ಗೃಹ ಲಕ್ಷ್ಮೀ ಹಣ ಪಾವತಿಯಾಗುತ್ತಿಲ್ಲ ಎಂಬ ದೂರುಗಳಿದ್ದು ಈ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಲು ಸೂಚಿಸಿದರು.

ಸ್ಥಳೀಯ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸಮಸ್ಯೆ ಆದರೆ ಸಮಿತಿಯ ಸದಸ್ಯರು ಸಂಬಂಧಿಸಿದ ಇಲಾಖೆ ಅಕಾರಿಗಳ ಗಮನಕ್ಕೆ ತರಬೇಕು ಎಂದು ತಾ.ಪಂ ಇಒ ಪ್ರಶಾಂತ ರಾವ್ ಸೂಚಿಸಿದರು.

ಸರ್ಕಾರದ ನಿಯಮದ ಪ್ರಮುಖ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತದೆ. ಆದರೆ ಹಲವೆಡೆ ಕಾರು ಇದ್ದವರ ಬಳಿ ಅಂತ್ಯೋದಯ ಪಡಿತರ ಚೀಟಿಯಿದೆ ಎಂದು ಅನುಷ್ಠಾನ ಸಮಿತಿ ಸದಸ್ಯೆ ಚರಿತ್ರಾ ಅಜೆಕಾರು ಹೇಳಿದರು. ಇದಲ್ಲದೇ ಬಿಪಿಎಲ್ ಕಾರ್ಡ್ ಪಡೆಯಲು ಮಕ್ಕಳಿಗೆ ಉದ್ಯೋಗ ಸಿಕ್ಕ ತಕ್ಷಣ ಪಡಿತರ ಚೀಟಿಯಿಂದ ಅವರ ಹೆಸರು ತೆಗೆದು ಹಾಕಲಾಗುತ್ತಿದೆ.ಇದರಿಂದ ಬಿಪಿಎಲ್ ಕಾರ್ಡ್ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದರು.

ಶಕ್ತಿ ಯೋಜನೆ ಕುರಿತು ವಿಷಯ ಪ್ರಸ್ತಾಪಿಸಿದ ಅಜಿತ್ ಹೆಗ್ಡೆ,ಉಡುಪಿ ಜಿಲ್ಲೆಗೆ 40 ಬಸ್ಸುಗಳ ಅವಶ್ಯಕತೆಯಿದೆ. ಗ್ರಾಮೀಣ ಭಾಗದ ಜನರ ಓಡಾಟಕ್ಕೆ ಇದರಿಂದ ಅನುಕೂಲವಾಗಲಿದೆ.
ನ್ಯಾಯಾಲಯದ ಆದೇಶದ ಮೇರೆಗೆ ಪಳ್ಳಿ ಮಾರ್ಗದ ಬಸ್ ಸ್ಥಗಿತಗೊಂಡಿದೆ. ಆದ್ದರಿಂದ ಸಮಯ ಬದಲಾಯಿಸಿ ಬಸ್ ಓಡಿಸುವಂತೆ ಸೂಚಿಸಿದರು. ಬಸ್ಸುಗಳಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಯುವನಿಧಿ ಪೋಸ್ಟರ್  ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ರಾವ್ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *