ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಶ್ರೀಮದ್ಭುವನೇಂದ್ರ ವಿದ್ಯಾಸಂಸ್ಥೆ ಕಾರ್ಕಳ ಇವರ ಜಂಟಿ ಆಯೋಜನೆಯಲ್ಲಿ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಗಳಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಬೆಟ್ಟು ಮಾಳ ಇಲ್ಲಿನ ಆಂಗ್ಲ ಮಾಧ್ಯಮದ ನಾಲ್ಕನೇ ತರಗತಿಯ ವಿದ್ಯಾರ್ಥಿ ಜೀವನ್ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ .