Share this news

ಕಾರ್ಕಳ,ನ.24: ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದು ಮತ್ತು ಜನರು ಕಚೇರಿಗಳಿಗೆ ಅನಗತ್ಯವಾಗಿ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರಕಾರವೇ ಜನರ ಬಳಿಗೆ ಬರುತ್ತಿದೆ. ನಿಗದಿತ ಸಮಯದಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಆಶಯವಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಕಾರ್ಕಳ ತಾಲೂಕು ಆಡಳಿತ ಹಾಗೂ ಪ್ರಜಾಸೇವಾ ಇಲಾಖೆ ವತಿಯಿಂದ ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸಭಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಅವರು ಮಾತನಾಡಿದರು.

9/11 ಸೇರಿದಂತೆ ವಿವಿಧ ಸೇವೆಗಳಿಗೆ ಸಂಬಂಧಿಸಿದ ಸಾಫ್ಟ್‌ವೇರ್ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಪದೇಪದೇ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ, ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಂದೇ ವೇದಿಕೆಗೆ ಕರೆತಂದು ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಸರ್ಕಾರದ ಯೋಜನೆಗಳು ಜನರಿಗೆ ಸರಿಯಾದ ಸಮಯದಲ್ಲಿ ತಲುಪಬೇಕು.ಸರ್ಕಾರದ ಆಡಳಿತ ವ್ಯವಸ್ಥೆ ಜನರ ಬಳಿಗೆ ಹೋಗಬೇಕು ಎನ್ನುವ ಉದ್ದೇಶದಿಂದ ಪ್ರಜಾಸೇವೆ ಆರಂಭಿಸಲಾಗಿದ್ದು,ಜನರು ಈ ವೇದಿಕೆಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಜಿಲ್ಲೆಯಲ್ಲಿನ 9/11 ಸಮಸ್ಯೆ ಕುರಿತು ಮಾತನಾಡಿದ ಶಾಸಕರು, 9/11 ಸಮಸ್ಯೆ ಜಟಿಲವಾಗುತ್ತಿದ್ದು, ಈ ನಿಯಮಾವಳಿ ಸಡಿಲಿಕೆ ಮಾಡಬೇಕು ಎಂದರು.ಬಾಹುಬಲಿ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಮೂಲಸೌಕರ್ಯಗಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು. ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಕುರಿತು ಈ ಭಾಗದ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಿರುವುದು ಸ್ವಾಗತಾರ್ಹ ಎಂದರು.
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಸೇವಾ ಆಂದೋಲನವನ್ನು ಗ್ರಾಮಮಟ್ಟಕ್ಕೂ ವಿಸ್ತರಿಸುವ ಉದ್ದೇಶವಿದೆ. ಸರಕಾರವೇ ಸಾರ್ವಜನಿಕರ ಬಳಿಗೆ ಬಂದು ಸಮಸ್ಯೆಗಳಿಗೆ ಸ್ಪಂದಿಸುವ ಈ ವ್ಯವಸ್ಥೆಯಲ್ಲಿ ಅಧಿಕಾರಿಗಳ ಸೇವಾ ಮನೋಭಾವ ಮತ್ತು ತ್ವರಿತ ಸ್ಪಂದನೆ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕೆಲಸ ಮಾಡಬೇಕಿದೆ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಕುಂದಾಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ರುದ್ರೇನ್, ಕುದುರೆಮುಖ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಕಳ ತಹಶೀಲ್ದಾರ್ ಮಂಜುಳಾ ನಾಯಕ್ ಸ್ವಾಗತಿಸಿದರು.

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *