
ಕಾರ್ಕಳ, ಜ. 26: ಕಾರ್ಕಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪುರಸಭೆ ವತಿಯಿಂದ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ದೇಶ ಹತ್ತಾರು ಜಾತಿ,ಮತ,ಪಂಗಡಗಳನ್ನು ಒಳಗೊಂಡಿದೆ. ನಮ್ಮಲ್ಲಿ ವಿವಿಧತೆಯಲ್ಲಿ ಏಕತೆ ಎನ್ನುವಂತೆ ನಾವೆಲ್ಲರೂ ಅನ್ಯೋನ್ಯತೆ ಹಾಗೂ ಸಾಮರಸ್ಯದಿಂದ ಜೀವನ ನಡೆಸಿದಾಗಲೇ ಗಣರಾಜ್ಯೋತ್ಸವದ ಉದ್ದೇಶ ಈಡೇರಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಮಂಜುನಾಥ ಪೈ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ತಹಸೀಲ್ದಾರ್ ಉದ್ಘಾಟಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ರೈತರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಕೃಷಿ ಅಧಿಕಾರಿ ರಮೇಶ್ ಉಳ್ಳಾಗಡ್ಡಿ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ ಸ್ವಾಗತಿಸಿ, ತಾ.ಪಂ ಇಓ ಪ್ರಶಾಂತ ರಾವ್ ವಂದಿಸಿದರು.
ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿದರು.
ಗಣೇಶ್ ಜಾಲ್ಸೂರು ಸಾಧಕರ ಪಟ್ಟಿ ಓದಿದರು.

.
.
.
.
