ಕಾರ್ಕಳ,ಜೂ.24: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಪ್ರಗತಿ ಪರಿಶೀಲನೆ ಹಾಗೂ ತರಬೇತಿ ಸಭೆಯು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ನೇತೃತ್ವದಲ್ಲಿ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಜೂ.24 ರಂದು ನಡೆಯಿತು.
ಬಿಎಲ್‌ಒ ಹಾಗೂ ವಿವಿಧ ರಾಜಕೀಯ ಪಕ್ಷಗಳ ಏಜೆಂಟರಿಗೆ SIR ಕುರಿತ ಗೊಂದಲಗಳ ನಿವಾರಣೆಗಾಗಿ ಈ ವಿಶೇಷ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮ್ಯಾಪಿಂಗ್ ಕಾರ್ಯದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ಮುಂಚೂಣಿಯಲ್ಲಿದೆ ಎಂದ ಅವರು, ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ ಸರಿಯಾದರೆ ಯಾವುದೇ ಸಮಸ್ಯೆಯಾಗುವುದಿಲ್ಲ. ಗೊಂದಲಗಳಿದ್ದಲ್ಲಿ ವಿಚಾರಣೆ ಮೂಲಕ ಪರಿಶೀಲನೆ ನಡೆಸಲಾಗುವುದು. ಪೌರತ್ವ ಹೊಂದಿರುವ ಹಾಗೂ 18 ವರ್ಷ ತುಂಬಿದ ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇರಲು 11 ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಹಿಯರಿಂಗ್‌ಗೆ ಅಥವಾ ವಿಚಾರಣೆಗೆ ಹಾಜರಾಗದ ಹಾಗೂ ಅನರ್ಹ ವ್ಯಕ್ತಿಗಳ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, BLOಗಳಿಗೆ ಮ್ಯಾಪಿಂಗ್ ಕಂಪ್ಲೀಷನ್, ಎಲಿಮಿನೇಷನ್ ಫಾರಂ ಭರ್ತಿ ಹಾಗೂ ಕ್ಲೈಮ್ ಅಂಡ್ ಅಬ್ಜೆಕ್ಷನ್ ಅವಧಿ ಎಂಬ ಮೂರು ಪ್ರಮುಖ ಹಂತಗಳಿರುತ್ತವೆ. ಬಿಎಲ್‌ಒ ಮತ್ತು ಬಿಎಲ್‌ಎಗಳ ನಡುವೆ ಸೂಕ್ತ ಸಮನ್ವಯ ಸಾಧಿಸುವುದು ಮುಖ್ಯವಾಗಿದೆ ಎಂದರು. ಮತದಾರರ ಪಟ್ಟಿ ಕ್ಲೀನ್ ಆಗಿದ್ದರೆ ಅದು ಪ್ರಜಾಪ್ರಭುತ್ವಕ್ಕೆ ಒಳಿತು. ಯಾವುದೇ ಒಬ್ಬ ಅರ್ಹ ಮತದಾರ ಹೊರಗುಳಿಯಬಾರದು ಮತ್ತು ಅನರ್ಹ ವ್ಯಕ್ತಿಗಳು ಪಟ್ಟಿಯೊಳಗೆ ಸೇರಬಾರದು ಎಂದು ಅವರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸುಬ್ರಹ್ಮಣ್ಯ ಶೆಟ್ಟಿ, ತಹಶೀಲ್ದಾರ್ ಪ್ರದೀಪ್, ಕಂದಾಯ ಇಲಾಖೆಯ ಅಧಿಕಾರಿಗಳು, BLOಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟರು ಉಪಸ್ಥಿತರಿದ್ದರು.



.
.
.
.
.
.
.
.
.
.
.
.
.
.
.
.
.
.
.
.
