ಕಾರ್ಕಳ: ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ.ಆರ್ ರಾಜು ಅವರಿಗೆ ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯು ನ.24 ರಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಮಾತನಾಡಿ,ಡಿ.ಆರ್ ರಾಜು ಕಾರ್ಕಳ ಕಾಂಗ್ರೆಸ್ ಪಕ್ಷದ ಓರ್ವ ಉದಾರ ಚರಿತ್ರೆಯ ಅಪರೂಪದ ಕರ್ಮಜೀವಿ. ಅವರು ತಮ್ಮ ಬದುಕಿನಲ್ಲಿ ಪ್ರತಿಪಾದಿಸಿಕೊಂಡು ಬಂದ ಸಮಾಜಮುಖೀ ಕೆಲಸಗಳ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಬದ್ಧತೆಯಾಗಿದೆ. ಆ ಮೂಲಕ ಅಗಲಿದ ಅವರ ಆತ್ಮಕ್ಕೆ ಚಿರಶಾಂತಿಯನ್ನು ಸಲ್ಲಿಸೋಣ ಎಂದು ಮಾಜಿ ಮುಖ್ಯ ಡಾ.ಎಂ. ವೀರಪ್ಪ ಮೊಯ್ಲಿ ಹೇಳಿದರು. ರಾಜುರವರು ಕಾಂಗ್ರೆಸ್ ಪಕ್ಷದ ಒಬ್ಬ ಅತಿ ನಿಷ್ಠಾವಂತ ಕರ್ತವ್ಯನಿಷ್ಟ ಜನಪರ ಚಿಂತನೆಯ ಕಾರ್ಯಸಾಧಕ ನಾಯಕರಾಗಿದ್ದರು. ಕಾಂಗ್ರೆಸ್ ಪ್ರತಿಪಾದಿಸಿಕೊಂಡು ಬಂದ ಶಾಂತಿ ಸೌಹಾರ್ಧತೆ ಅವರ ಬದುಕಿನ ಜೀವಾಳವಾಗಿತ್ತು. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಮೊಯ್ಲಿ ಹೇಳಿದರು.
ಕಾಂಗ್ರೆಸ್ ಹಿರಿಯ ನಾಯಕ ಉದಯ್ ಶೆಟ್ಟಿ ಮಾತನಾಡಿ ದಿ. ರಾಜುರವರು ಸಮಾಜದ ಸರ್ವಾಂಗೀಣ ಚಿಂತೆನೆ ಉಳ್ಳವರು ಸಮಾಜದ ಸರ್ವ ವ್ಯಕ್ತಿಗಳನ್ನು ಹೊಂದಿಕೊಂಡ ಜೀವನ ಸಾಧನೆ ಮಾಡಿದವರು ಕೊರೋನಾ ಕಷ್ಟ ಕಾಲದ ಸಂದರ್ಭದಲ್ಲಿ ಅವರು ಮಾಡಿದ ಜನಸೇವೆ ಅವಿಸ್ಮರಣೀಯ ಅವರ ಅಗಲಿಕೆ ನನಗೆ ಪಕ್ಷ ಸಂಘಟನೆಯ ವಿಚಾರವಾಗಿಯೂ ಅಪಾರ ನಷ್ಟ ಉಂಟು ಮಾಡಿದೆ ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುದ್ರಾಡಿ ಮಂಜುನಾಥ ಪೂಜಾರಿ, ಕೆಪಿಸಿಸಿ ಸದಸ್ಯ ನೀರೆ ಕೃಷ್ಣ ಶೆಟ್ಟಿ, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ನುಡಿ ನಮನ ಸಲ್ಲಿಸಿ ಮೃತರ ಗುಣಗಾನ ಗೈದರು.
ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಗೋಪಿನಾಥ್ ಭಟ್, ನಿಕಟ ಪೂರ್ವ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಿಲ್ಲಾ ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ, ಶೃಂಗೇರಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ನಾಗರಾಜ್, ಬ್ಲಾಕ್ ಸಮಿತಿಯ ಪದಾಧಿಕಾರಿಗಳು ವಿವಿದ ಘಟಕಗಳ ಅದ್ಯಕ್ಷರುಗಳು, ಗ್ರಾಮೀಣ ಸಮಿತಿಯ ಅದ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.