
ಕಾರ್ಕಳ, ಜು.07: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್ ಬಳಿ ಡಿವೈಡರ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಕಾರ್ಕಳ ಕಡೆಯಿಂದ ಬೆಳುವಾಯಿ ಮಾರ್ಗವಾಗಿ ಮೂಡಬಿದ್ರೆಗೆ ಹೋಗುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಸಹಸವಾರ ರಮೇಶ್ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
