
ಕಾರ್ಕಳ,ಜು.30: ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ಸ್ಕೂಟರ್ಗೆ ಈಚರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಡ್ತಲದ ವಸಂತಿ ಎಂಬವರು ಜು.29 ರಂದು ಸ್ಕೂಟರ್ನಲ್ಲಿ ಗಂಡ ರಾಘವ ಪೂಜಾರಿ ಅವರೊಂದಿಗೆ ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹೋಗುತ್ತಿದ್ದಾಗ ಕುಕ್ಕುಂದೂರಿನ ಅಮ್ಮ ಗ್ಯಾರೇಜ್ ಬಳಿ ಮುಂದುಗಡೆಯಿAದ ಹೋಗುತ್ತಿದ್ದ ಈಚರ್ ಲಾರಿ ಚಾಲಕ ಯಾವುದೇ ಸೂಚನೆ ನೀಡದೆ ಲಾರಿಯನ್ನು ಒಮ್ಮೆಲೇ ಬಲಕ್ಕೆ ತಿರುಗಿಸಿದ ಪರಿಣಾಮ ಸ್ಕೂಟರ್ಗೆ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿದ್ದು, ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
