

ಕಾರ್ಕಳ ಜ್ಞಾನಸುಧಾ:
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ‍್ಯೋತ್ಸವದಲ್ಲಿ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಮೇಜರ್ ಜನರಲ್ ಎಂ.ವಿ. ಭಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಇವರು, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನುಸ್ಮರಿಸಿದರು. ದೇಶ ಸೇವೆ ಮಾಡಲು ಸೈನ್ಯದಲ್ಲಿ ಇರುವ ವಿವಿಧ ಅವಕಾಶಗಳ ಬಗ್ಗೆ ತಿಳಿಸಿ,ವಿದ್ಯಾರ್ಥಿಗಳು ದೇಶದ ಏಕತೆ, ಶಾಂತಿ ಮತ್ತು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಗಿಲ್ ವಿಜಯದ ಸಾಕ್ಷ್ಯಚಿತ್ರವನ್ನು ಪ್ರಸ್ತುತಪಡಿಸಲಾಯಿತು ವಿದ್ಯಾರ್ಥಿಗಳಿಂದ ಸ್ವಾತಂತ್ರ‍್ಯೋತ್ಸವದ ಮಹತ್ವವನ್ನು ಸಾರುವ ದೇಶಭಕ್ತಿ ಗೀತೆ, ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ವೇದಿಕೆಯಲ್ಲಿ ಸುಬೇದಾರ್ ಉಮೇಶ್ ನಾಯ್ಕ್, ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ದಿನೇಶ್ ಎಂ.ಕೊಡವೂರು, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಪ್ರಾಂಶುಪಾಲೆಯಾಗಿರುವ ವಾಣಿ.ಕೆ.ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರುಗಳಾಗಿರುವ ಸಾಹಿತ್ಯ, ಉಷಾ ರಾವ್.ಯು, ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿರುವ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನೀಷ್ ಕುಮಾರ್ ಪ್ರಾರ್ಥಿಸಿ, ಪಾರ್ಥಚಿರಂತನ ಸ್ವಾತಂತ್ರö್ಯ ಸಂದೇಶ ವಾಚಿಸಿದರು., ಸಹಶಿಕ್ಷಕಿ ಕುಮಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಣಿಪಾಲ ಜ್ಞಾನಸುಧಾ:
ಉಡುಪಿ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾ ನಗರದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು. ಉಡುಪಿಯ ಪ್ರಖ್ಯಾತ ವಕೀಲರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಧ್ವಜಾರೋಹಣಗೈದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಯುವಜನತೆ ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು,ಸ್ವಾತಂತ್ರ‍್ಯ ಹೋರಾಟಕ್ಕಾಗಿ ಮಡಿದ ವೀರರ ತ್ಯಾಗ ಬಲಿದಾನವನ್ನು ಸ್ಮರಿಸಿ ಜೀವನದಲ್ಲಿ ಅಳವಡಿಸುವಂತಾಗಬೇಕು. ದೇಶಪ್ರೇಮವನ್ನು ಮೈಗೂಡಿಸಿ,ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವವನ್ನು ಬೆಳೆಸಬೇಕು ಎಂದರು.
ಈ ಸಂದರ್ಭದಲ್ಲಿಎನ್.ಸಿ.ಸಿ ಕೆಡೆಟ್ ಗಳು ಗೌರವ ವಂದನೆಯನ್ನು ಸಲ್ಲಿಸಿದರು. ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಉಪ ಪ್ರಾಂಶುಪಾಲರುಗಳಾದ ರವಿ ಜಿ, ಹೇಮಂತ ಮತ್ತು ನವೀನ್ ಎ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಕು.ಮಂಜುಳ ಕಾರ್ಯಕ್ರಮ ನಿರ್ವಹಿಸಿದರು.
ಉಡುಪಿ ಜ್ಞಾನಸುಧಾ:
ಉಡುಪಿ: ಉಡುಪಿಯ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ (ನಿವೃತ್ತ) ಇವರು ಜೀವನದಲ್ಲಿ ಯಶಸ್ಸು ಲಭಿಸಬೇಕಾದರೆ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ವಿಶ್ವಾಸದಿಂದ ಮುAದವರಿಯಬೇಕು. ಪ್ರತಿ ಹೆಜ್ಜೆಯಲ್ಲೂ ಜೊತೆಯಾದ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಮನೋಭಾವ ನಮ್ಮಲ್ಲಿರಬೇಕು. ಭಾರತೀಯ ಸೇನೆಯಲ್ಲಿರುವ ಉದ್ಯೋಗಾವಕಾಶಗಳು, ವಿವಿಧ ರೀತಿಯ ಪರೀಕ್ಷೆಗಳು, ಸೇನೆಯಲ್ಲಿ ಸೇವೆ ಸಲ್ಲಿಸುವುದು ವ್ಯಕ್ತಿ ಗೌರವವನ್ನು ಹೆಚ್ಚಿಸುವುದರ ಜೊತೆಗೆ ವೃತ್ತಿ ಭದ್ರತೆಯನ್ನು ಒದಗಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ (ನಿವೃತ್ತ) ಇವರ ಸುದೀರ್ಘ ಕಾಲದ ಸೇವೆಯನ್ನು ಗುರುತಿಸಿ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿಧಿ ಭಾಗವತ್ , ಉಪನ್ಯಾಸಕರು, ಉಪನ್ಯಾಸಕೇತರ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಸ್ವರೂಪ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಅಜೆಕಾರು ಜ್ಞಾನಸುಧಾ:
ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ದೇಶಭಕ್ತಿ, ಸಂಭ್ರಮ ಹಾಗೂ ಸಡಗರದ ವಾತಾವರಣದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಜೆಕಾರಿನ ಪ್ರಸಿದ್ಧ ವೈದ್ಯರು ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಡಾ. ಸಂತೋಷ್ ಕುಮಾರ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, “ದೇಶಪ್ರೇಮವೆಂಬುದು ಕೇವಲ ಮಾತುಗಳಲ್ಲಿ ಸೀಮಿತವಾಗದೆ, ನಮ್ಮ ನಡೆ-ನುಡಿಗಳಲ್ಲೂ ಪ್ರತಿಬಿಂಬಿಸಬೇಕು. ಪ್ರತಿಯೊಬ್ಬರೂ ದೇಶಪ್ರೇಮದೊಂದಿಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು” ಎಂದು ಕರೆ ನೀಡಿದರು.
ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅವರು ತಮ್ಮ ಪ್ರೇರಣಾದಾಯಕ ನುಡಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದ ಕಿಚ್ಚು ಹೊತ್ತಿಸಿ, ಸ್ವಾತಂತ್ರ‍್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುತ್ತಾ, ದೇಶದ ಪ್ರಗತಿಯಲ್ಲಿ ಯುವಜನತೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಸಂತೋಷ್, ಉಪಪ್ರಾಂಶುಪಾಲರಾದ ಶ್ರೀಮತಿ ಆರತಿ, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರಾಮಚಂದ್ರ ನೆಲ್ಲಿಕಾರ್, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ, ಭಾಷಣ ಸೇರಿದಂತೆ ವಿವಿಧ ಮನಮೋಹಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದವು. ವಿದ್ಯಾರ್ಥಿಗಳ ದೇಶಭಕ್ತಿ ಮತ್ತು ಕಲಾ ಪ್ರತಿಭೆ ನೆರೆದವರ ಮನಸೂರೆಗೊಂಡಿತು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಆಶಾ ಜ್ಯೋತಿ ಹಾಗೂ ವಿದ್ಯಾರ್ಥಿನಿ ಫಾತಿಮಾ ಶಲ್ಬಿಯಾ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ದೇಶಭಕ್ತಿಯ ಭಾವನೆ ಹಾಗೂ ರಾಷ್ಟ್ರಾಭಿಮಾನದ ಸಂದೇಶದೊಂದಿಗೆ ನಡೆದ ಕಾರ್ಯಕ್ರಮವು ಎಲ್ಲರ ಮನದಲ್ಲಿ ಸ್ವಾತಂತ್ರ್ಯದ ಮಹತ್ವವನ್ನು ಮತ್ತೊಮ್ಮೆ ಬಿತ್ತುವಲ್ಲಿ ಯಶಸ್ವಿಯಾಯಿತು.








.
.
.
.
.
.
.
.
.
.
.
.
.
.
.
.
.
.
.
.
