ಕಾರ್ಕಳ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರಿಸರ ನಾಶದಿಂದ ಪ್ರಾಕೃತಿಕ ಅಸಮತೋಲನ ಉಂಟಾಗಿ ಅನೇಕ ಸಮಸ್ಯೆಗಳು ಉಂಟಾಗಿವೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ವನಮಹೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ ನಿತ್ಯೋತ್ಸವ ಆಗಲಿ ಎಂದು ಸಂಜೀವ ದೇವಾಡಿಗ ವಿದ್ಯಾರ್ಥಿಗಳಿಗೆ ಕಿವಿಮಾತು ನೀಡಿದರು.
ಅವರು ಕೆ.ಎಂ.ಇ.ಎಸ್ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಇಲಾಖೆಯ ವತಿಯಿಂದ ನೀಡಿದ ಗಿಡಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ಮನರಂಜನಾ ಕಾರ್ಯಕ್ರಮಗಳನ್ನು ನೀಡಿದರು. ಔಷಧೀಯ ಸಸ್ಯಗಳ ಪ್ರದರ್ಶನ ಮಾಡಲಾಯಿತು.
ವೇದಿಕೆಯಲ್ಲಿ ಪ್ರಾಂಶುಪಾಲರಾದ ರಾಮಚಂದ್ರ ನೆಲ್ಲಿಕಾರ್ , ಪ್ರೌಢ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಪಾಟ್ಕರ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಶ್ರೀಮತಿ ಲೊಲಿಟಾ ಡಿಸಿಲ್ವಾ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪೂಜನ್ ನಿರೂಪಿಸಿ, ತಸ್ಮೀಯಾ ಸ್ವಾಗತಿಸಿ, ಶ್ರೀವತ್ಸ ಧನ್ಯವಾದವಿತ್ತರು.














