

ಕಾರ್ಕಳ,ಅ.08: ಪ್ರಕೃತಿ ಮತ್ತು ವನ್ಯಜೀವಿಗಳ ಮಹತ್ವವನ್ನು ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಅರ್ಥಮಾಡಿಕೊಳ್ಳುವಂತಾಗಬೇಕು. ಅರಣ್ಯ, ವನ್ಯಜೀವಿ ಹಾಗೂ ಪರಿಸರ ಪರಸ್ಪರ ಅವಲಂಬಿತವಾಗಿದ್ದು, ಇವುಗಳ ಸಂರಕ್ಷಣೆಯ ಮೂಲಕವೇ ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಹೇಳಿದರು.
ಅವರು ಕುದುರೆಮುಖ-ಕಾರ್ಕಳ ವನ್ಯಜೀವಿ ವಿಭಾಗದ ವತಿಯಿಂದ ‘ಆವಾಸಸ್ಥಾನಗಳ ಸಂಪರ್ಕ, ಸಮೃದ್ಧಿ-ವನ್ಯಜೀವಿ ಆಶಯ’ ಎಂಬ ಆಶಯದಡಿ ಅ.2ರಿಂದ 8ರವರೆಗೆ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹದ ವಿವಿಧ ಜಾಗೃತಿ, ಪ್ರಚಾರ ಮತ್ತು ಸಮುದಾಯ ಸಹಭಾಗಿತ್ವ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪೆರ್ವಾಜೆಯ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಸಂರಕ್ಷಣೆ ಎಂದರೆ ಕೇವಲ ಮರಗಳನ್ನು ಉಳಿಸುವುದಲ್ಲ; ನೀರು, ಗಾಳಿ, ಮಣ್ಣು ಹಾಗೂ ಇಡೀ ಜೀವಜಾಲದ ಸಂರಕ್ಷಣೆಯೂ ಹೌದು. ಪರಿಸರ ವ್ಯವಸ್ಥೆಯ ಪ್ರತಿಯೊಂದು ಜೀವಿಗೂ ತನ್ನದೇ ಆದ ಮಹತ್ವವಿದೆ. ಮುಂದಿನ ಪೀಳಿಗೆಗೆ ಉತ್ತಮ ಹಾಗೂ ಸಮೃದ್ಧ ಪರಿಸರವನ್ನು ಉಳಿಸಿಕೊಡುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದರು.
ಶಾಲಾ ಹಂತದಿAದಲೇ ಮಕ್ಕಳಲ್ಲಿ ಪ್ರಕೃತಿ ಕಾಳಜಿಯನ್ನು ಬೆಳೆಸುವ ಅಗತ್ಯವಿದೆ. ಮಕ್ಕಳನ್ನು ಕೇಂದ್ರವಾಗಿರಿಸಿಕೊAಡು ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಡಿಎಫ್‌ಒ ರವಿಶಂಕರ್ ಐಎಫ್‌ಎಸ್ ಮಾತನಾಡಿ, ಪಠ್ಯಾಧಾರಿತ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಪ್ರಕೃತಿಯನ್ನು ನೇರವಾಗಿ ಪರಿಚಯಿಸುವ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದರು. ಸ್ಥಳೀಯವಾಗಿ ಕಂಡುಬರುವ ಪಕ್ಷಿಗಳು, ಚಿಟ್ಟೆಗಳು ಹಾಗೂ ಸಸ್ಯ ಪ್ರಭೇದಗಳನ್ನು ಗುರುತಿಸುವಂತಹ ಚಟುವಟಿಕೆಗಳು ಮಕ್ಕಳಲ್ಲಿ ಪ್ರಕೃತಿಯ ಬಗ್ಗೆ ಆಸಕ್ತಿ ಮೂಡಿಸುವ ಜತೆಗೆ ಸಂರಕ್ಷಣೆಯ ಜವಾಬ್ದಾರಿಯನ್ನೂ ಬೆಳೆಸುತ್ತವೆ ಎಂದರು.
ಅರಣ್ಯ ಇಲಾಖೆಯ ಡಿಎಫ್‌ಒ ಪ್ರವೀಣ್ ಕುಮಾರ್ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವೀಣಾ ರಾಜೇಶ್, ಶ್ರೀ ಭುವನೇಂದ್ರ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲೆ ವೀಣಾ ಶೆಣೈ ಹಾಗೂ ಸಿದ್ಧಾಪುರ ವಲಯದ ಎಸಿಎಫ್ ಜಿ.ಡಿ. ದಿನೇಶ್ ಉಪಸ್ಥಿತರಿದ್ದರು.
ಕುದುರೆಮುಖ ವನ್ಯಜೀವಿ ವಿಭಾಗದ ಎಸಿಎಫ್ ಲತಾ ಗುರು ಭಟ್ ಪ್ರಸ್ತಾವನೆಗೈದು, ವನ್ಯಜೀವಿ ಸಪ್ತಾಹದ ಮೂಲಕ ವನ್ಯಜೀವಿಗಳ ಆವಾಸಸ್ಥಾನ ಮತ್ತು ಅವುಗಳ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ. ಕುದುರೆಮುಖದ ಅಮೂಲ್ಯ ಅರಣ್ಯ ಸಂಪತ್ತು ಹಾಗೂ ವೈವಿಧ್ಯಮಯ ವನ್ಯಜೀವಿಗಳನ್ನು ಮುಂದಿನ ಪೀಳಿಗೆಗೂ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸಪ್ತಾಹದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗೌರವಿಸಲಾಯಿತು. ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ, ಭಾಷಣ, ರಸಪ್ರಶ್ನೆ, ಮರ–ಪ್ರಾಣಿ ಗುರುತಿಸುವಿಕೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕುದುರೆಮುಖ–ಕಾರ್ಕಳ ವಲಯದ ಆರ್‌ಎಫ್‌ಒ ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿದರು. ಇಲಾಖೆಯ ಸಿಬ್ಬಂದಿ ವಿನುತಾ ಕಾರ್ಯಕ್ರಮ ನಿರೂಪಿಸಿದರು





.
.
.
.
.
.
.
.
.
.
.
.
.
.
.
.
.
.
.
.
