Share this news

ಕಾರ್ಕಳ: ಕಾರ್ಕಳ ಬಂಡೀಮಠದ ಮೂಡುಮಹಾಗಣಪತಿ ಸಭಾಭವನದ ಮುಂಭಾಗ ಮುಖ್ಯರಸ್ತೆಯಲ್ಲಿ ಮಹಿಳೆಗೆ ಕಾರು ಡಿಕ್ಕಿಯಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಂಡೀಮಠ ನಿವಾಸಿ ಕಮಲವ್ವ ಗಂಗಪ್ಪಳ (69) ಗಾಯಗೊಂಡ ಮಹಿಳೆ. ಅವರು ನ.19 ರಂದು ಬೆಳಿಗ್ಗೆ ಹಾಲು ಖರೀದಿ ಮಾಡಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಂಗ್ಲೆಗುಡ್ಡೆ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಕಮಲವ್ವ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *