ಕಾರ್ಕಳ: ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಇದೇ ವೇಳೆ ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು ಹಾಗೂ ಸುರಕ್ಷಾ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಮಿಯ್ಯಾರು ಧನ್ಯವಾದವಿತ್ತರು.