

ಕಾರ್ಕಳ,ಸೆ.25 : ಭೈರವರಸು ಆಳಿದ ನಾಡು ಜೈನರ ನೆಲೆವೀಡು ಕಾರ್ಕಳದ ವೈರಾಗ್ಯಮೂರ್ತಿ ಗೊಮ್ಮಟೇಶ್ವರನ 2027ರ ಮಹಾಮಜ್ಜನಕ್ಕೆ ಈಗಾಗಲೇ ಪೂರ್ವಸಿದ್ಧತೆಗಳು ಆರಂಭವಾಗಿವೆ.
2027ರ ಫೆ.11ರಿಂದ 28ರವರೆಗೆ ನಡೆಯಲಿರುವ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಬೇಕು ಎನ್ನುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿನಿತ್ಯ ತಯಾರಿ ನಡೆಯಲಿ ಎಂದು ಏಲಾಚಾರ್ಯ 108 ಶ್ರೀ ಪ್ರಸಂಗಸಾಗರ ಮುನಿಮಹಾರಾಜರು ಆಶಿಸಿದರು.
ಅವರು ಸೆ. 25ರಂದು ಶುಕ್ರವಾರ ಮಹಾಮಸ್ತಕಾಭಿಷೇಕ ಕಾರ್ಯಾಲಯದಲ್ಲಿ ಮಹೋತ್ಸವದ ಮನವಿ ಪತ್ರ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿ, 12 ವರ್ಷಕ್ಕೊಮ್ಮೆ ಜರುಗುವ ಮಸ್ತಕಾಭಿಷೇಕ ವೈಭವದಿಂದ ನೆರವೇರಬೇಕು. ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಎಲ್ಲಾ ವರ್ಗದವರ ಸಹಕಾರ ಅವಶ್ಯವೆಂದರು.
ಮಹಾಮಸ್ತಕಾಭಿಷೇಕ ಸಮಿತಿ ಉಪಾಧ್ಯಕ್ಷ ರತ್ನಾಕರರಾಜ್ ಅರಸರು, ಅನಂತರಾಜ ಪೂವಣಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಸ್ವಾಗತಿಸಿ, ಡಾ. ಸುವೀರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಕೋಶಾಧಿಕಾರಿ ಮೋಹನ್ ಪಡಿವಾಳ್ ವಂದಿಸಿದರು.





.
.
.
.
.
.
.
.
.
.
.
.
.
.
.
.
.
.
.
.
