
ಬೆಂಗಳೂರು, ಮಾ. 31: ರಾಜ್ಯಾದ್ಯಂತ 2026ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2026ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.
ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದಿದ್ದ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು.
ಈ ಬಾರಿ ಫಲಿತಾಂಶ ಪ್ರಕಟಿಸುವ ವಿಧಾನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ವೇಳೆ ಫಲಿತಾಂಶ ಲಭ್ಯವಾಗಿಲ್ಲ. ಹಂತ ಹಂತವಾಗಿ ಫಲಿತಾಂಶಗಳನ್ನು ಬಿಡುಗಡೆ ಮಾಡುವ ಕ್ರಮವನ್ನು ಮಂಡಳಿ ಅನುಸರಿಸಿದೆ. ಇದರ ಪರಿಣಾಮವಾಗಿ, ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೊದಲು ಫಲಿತಾಂಶ ಲಭ್ಯವಾಗುವ ಸಾಧ್ಯತೆ ಇದೆ. ಇತರ ಪ್ರದೇಶಗಳ ವಿದ್ಯಾರ್ಥಿಗಳು ಸ್ವಲ್ಪ ಸಮಯ ಕಾಯಬೇಕಾಗಬಹುದು.
ವೆಬ್ಸೈಟ್ ಮೇಲೆ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಫಲಿತಾಂಶ ಪ್ರಕಟಣೆಯಲ್ಲಿ ಕೊಂಚ ಬದಲಾವಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಮಂಡಳಿ ಸೂಚಿಸಿದ್ದು, ದಿನದ ಅವಧಿಯಲ್ಲಿ ಎಲ್ಲರಿಗೂ ಫಲಿತಾಂಶ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.















.
.
.
.
.
.
.
.
.
.
