
ಬೆಂಗಳೂರು, ಜ.21: ನಾಳೆಯಿಂದ ರಾಜ್ಯದ ವಿಶೇಷÀ ವಿಧಾನಮಂಡಲ ಅಧಿವೇಶನ ನಡೆಯಲಿದ್ದುಲೀ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದಾರೆ.
ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಸಂಜೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದ ಸಚಿವರ ನಿಯೋಗ ರಾಜಭವನಕ್ಕೆ ತೆರಳಿ ಅವರ ಮನವೊಲಿಸಲಿದ್ದು, ರಾಜ್ಯಪಾಲರ ಪ್ರತಿಕ್ರಿಯೆ ಏನು ಎನ್ನುವುದು ತೀವೃ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಬೇಕೆಂಬ ನಿಯಮವಿದೆ.ಒಂದುವೇಳೆ ರಾಜ್ಯಪಾಲರು ಈ ಅಧಿವೇಶನಕ್ಕೆ ಹಾಜರಾಗದಿದ್ದರೆ ಸಾಂವಿಧಾನಿಕ ಬಿಕ್ಕಟ್ಟಿಗೂ ಕಾರಣವಾಗುವ ಸಾಧ್ಯತೆಯಿದೆ.
ಮಂಗಳವಾರ ತಮಿಳುನಾಡು ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯಪಾಲರು ಕೂಡ ಭಾಷಣ ಮಾಡಲು ನಿರಾಕರಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

.
.
.
.
