
ಕಾರ್ಕಳ,ಡಿ.19: ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ಕೊಡಮಾಡುವ “ಕರುನಾಡ ಸಿರಿ -2025 ಪ್ರಶಸ್ತಿಗೆ ಶ್ರೀ ಬಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರೌಢಶಾಲೆ ದುರ್ಗ ತೆಳ್ಳಾರು ಆಯ್ಕೆಯಾಗಿದೆ.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
.
.
