Share this news

ಕಾರವಾರ: ಕಾರವಾರದ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದ್ದ ಸೇತುವೆ ಮಂಗಳವಾರ ತಡರಾತ್ರಿ ಕುಸಿದುಬಿದ್ದಿದ್ದು, ಘಟನೆಯಲ್ಲಿ ಲಾರಿ ಚಾಲಕನೊಬ್ಬ ಗಾಯಗೊಂಡಿದ್ದಾನೆAದು ತಿಳಿದುಬಂದಿದೆ.

ಕಾರವಾರ ಗೋವಾ ಸಂಪರ್ಕ ಮಾಡುವ ನಗರದ ಕೋಡಿಭಾಗ್ ಬಳಿ ಇರುವ ಈ ಸೇತುವೆ ಮಂಗಳವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಕುಸಿದು ಬಿದ್ದಿದ್ದು, ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದೆ. ಇದೇ ವೇಳೆ ಸೇತುವೆ ಮೇಲೆ ಗೋವಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ. ತಕ್ಷಣ ಮೀನುಗಾರರು ಹಾಗೂ ಪೋಲಿಸರು ಕಾರ್ಯಾಚರಣೆ ನಡೆಸಿಲಾರಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ ಯಾವುದಾದರೂ ವಾಹನ ಬಿದ್ದಿರುವ ಬಗ್ಗೆ ಸ್ಥಳೀಯ ಮೀನುಗಾರರ ಜೊತೆ ಪೊಲೀಸರು ದೋಣಿಗಳ ಮೂಲಕ ಹುಡುಕಾಟ ನಡೆಸಿದ್ದಾರೆ.
ಗಾಯಗೊಂಡಿರುವ ವ್ಯಕ್ತಿಯನ್ನು ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ಎಂದು ಗುರುತಿಸಲಾಗಿದ್ದು, ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಶಾಸಕ ಸತೀಶ್ ಸೈಲ್ ಘಟನೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ, ಎಸ್ಪಿ ಎಮ್.ನಾರಾಯಣ ಸೇರಿ ಅಧಿಕಾರಿಗಳ ತಂಡ ಬೀಡುಬಿಟ್ಟಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಈ ನಡುವೆ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಕುಸಿದ ಪರಿಣಾಮವಾಗಿ, ಅದರ ಹತ್ತಿರದಲ್ಲೇ ಕಟ್ಟಲಾಗಿರುವ ಹೊಸ ಸೇತುವೆಯ ಗುಣಮಟ್ಟವನ್ನು ಪರಿಶೀಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರವಾರದಿಂದ ಗೋವಾ ಕಡೆಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.

41 ವರ್ಷಗಳ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿ 66 ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್​ಬಿ ಕಂಪನಿ ವಿರುದ್ಧ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

                        

                          

                        

                          

 

`

Leave a Reply

Your email address will not be published. Required fields are marked *