Share this news

ಪಡುಬಿದ್ರೆ :ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ಪೊಲೀಸ್ ವಸತಿಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜ್ಯೋತಿ (29)ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್‌ ಸಿಬ್ಬಂದಿ. ಶುಕ್ರವಾರ ಸಂಜೆ ಎಂದಿನಂತೆ ಕರ್ತವ್ಯ ಮುಗಿಸಿ ವಸತಿಗೃಹಕ್ಕೆ ತೆರಳಿದ ಬಳಿಕ ಈ ಕೃತ್ಯ ಎಸಗಿದ್ದಾರೆ.

ಮೃತ ಜ್ಯೋತಿ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಮನೆಗೆ ಬಂದ ಬಳಿಕ ಪತ್ನಿ ತನ್ನ ರೂಮಿನಲ್ಲಿ ಆತ್ಮಹತ್ಯೆಗೈದಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕಾಪು ತಹಶೀಲ್ದಾರ್ ಪ್ರತಿಭಾ ಆ‌ರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Leave a Reply

Your email address will not be published. Required fields are marked *