Share this news

ಶಿವಮೊಗ್ಗ:ತನ್ನ ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಕ್ಷರಶಃ ಕೆಂಡಾಮಂಡಲರಾಗಿರುವ ಈಶ್ವರಪ್ಪ ನಾಳೆಯ ಮೋದಿ ಕಾರ್ಯಕ್ರಮಕ್ಕೆ ಭಾಗವಹಿಸುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿ ಅವರು, ನಾನು ಸ್ವತಂತ್ರ ಅಭ್ಯರ್ಥಿಯಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತ. ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಂಬಲ ಸೂಚಿಸುತ್ತೇನೆ ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆದರೆ ಮೋದಿ ಸ್ವಾಗತ ಕಟೌಟ್ ನಲ್ಲಿ ಈಶ್ವರಪ್ಪ ಭಾವಚಿತ್ರ ಇದೆ. ಶಿವಮೊಗ್ಗದಲ್ಲಿ ನಾಳೆ ಮೋದಿ ಪ್ರಚಾರ ಸಮಾವೇಶವಿದೆ.ಟಿಕೆಟ್ ಸಿಗದೇ ಕೆ ಎಸ್ ಈಶ್ವರಪ್ಪ ಇದೀಗ ಬಂಡಾಯ ಎದ್ದಿದ್ದಾರೆ ಎನ್ನಲಾಗಿದೆ. ನಾಳಿನ ಮೋದಿ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿರುವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರ ಕಟೌಟ್ ಅಲ್ಲಿ ಹಾಕಿರುವುದು ಕುತೂಹಲ ಮೂಡಿಸಿದೆ.
ಕಾಂತೇಶ್ ಗೆ ಟಿಕೆಟ್ ತಪ್ಪಿದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ‌ ಅವರು ಮೋಸ ಮಾಡಿದ್ದಾರೆ. ಹಾಗಾಗಿ ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪುನರುಚ್ಚರಿಸಿದ್ದಾರೆ

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *