Share this news

 

ಕಾರ್ಕಳ: ಕೆಂಪೇಗೌಡರು ಸಮರ್ಥ ಆಡಳಿತಗಾರರಾಗಿದ್ದು, ತಮ್ಮ ಪ್ರಜೆಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದರು. ಕೆಂಪೇಗೌಡರ ದೂರದೃಷ್ಟಿತ್ವ ಮತ್ತು ಸಮರ್ಪಣಾ ಮನೋಭಾವ ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ತಹಶೀಲ್ದಾರ್ ಆರ್ ಪ್ರದೀಪ್ ಹೇಳಿದರು.
ಅವರು ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ವತಿಯಿಂದ ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ವಿವಿಧ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೆಂಪೇಗೌಡರು ತಮ್ಮ ಆಡಳಿತದಲ್ಲಿ ಸಾಮಾಜಿಕ ಸಾಮರಸ್ಯ ಮತ್ತು ಆರ್ಥಿಕ ಪ್ರಗತಿಗೂ ಒತ್ತು ನೀಡಿದ್ದರಿಂದ ಬೆಂಗಳೂರು ಇಂದು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಬೆಳೆದು ನಿಂತಿದೆ. ಈ ಜಯಂತಿಯ ಸಂದರ್ಭ ಕೆಂಪೇಗೌಡರ ತತ್ವಗಳನ್ನು ಮತ್ತೊಮ್ಮೆ ನೆನಪಿಸಿಕೊಂಡು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

ಕೆಂಪೇಗೌಡರ ಜಯಂತಿಯ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ಎಎಸ್‌ಪಿ ಡಾ ಹರ್ಷ ಪ್ರಿಯಂವದ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ಶಾಲೆಯ ಮುಖ್ಯ ಶಿಕ್ಷಕ ದಿವಾಕರ್ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ಜಲ್ಸೂರು ಕೆಂಪೇಗೌಡರ ಬಗ್ಗೆಉಪನ್ಯಾಸ ನೀಡಿದರು. ಶಿಕ್ಷಕ ದೇವದಾಸ್ ಕೆರೆಮನೆ ನಿರೂಪಿಸಿದರು.

 

Leave a Reply

Your email address will not be published. Required fields are marked *