ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ(62) ಎಂದು ಗುರುತಿಸಲಾಗಿದೆ.
ಸಾಲಿಗ್ರಾಮದಿಂದ ತೆಕ್ಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕೊಂದು ಸವಾರ ನಿಯಂತ್ರಣ ತಪ್ಪಿ ಕೋಟ ಪೆಟ್ರೋಲ್ ಬಂಕ್ ಸಮೀಪ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ್ ಶೆಟ್ಟಿಗೆ ನೇರ ಡಿಕ್ಕಿ ಹೊಡೆದಿದೆ.ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಂದ್ರಶೇಖರ ಶೆಟ್ಟಿ ಗಂಭೀರ ಗಾಯಗೊಂಡಿದ್ದರು. ಅಲ್ಲದೆ ಬೈಕ್ ಸವಾರರಾದ ಸಾಲಿಗ್ರಾಮದ ಪೃಥ್ವಿಶ್ ದೇವಾಡಿಗ, ಶಶಾಂಕ್ ದೇವಾಡಿಗ ಇವರು ಕೂಡ ಅಪಘಾತದಲ್ಲಿ ಗಾಯಗೊಂಡಿರುತ್ತಾರೆ. ಗಾಯಗೊಂಡವರನ್ನು ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಚಂದ್ರಶೇಖರ ಶೆಟ್ಟಿ ಮೃತಪಟ್ಟಿರುತ್ತಾರೆ.
ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ