Share this news

 

 

 

ಮಂಗಳೂರು : ಚಲಿಸುತ್ತಿದ್ದ ಬಸ್ಸಿನಲ್ಲಿ ಕಂಡಕ್ಟರ್ ಓರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ನಡೆದಿದ್ದು, ಕಾಮುಕ ಬಸ್ ನಿರ್ವಾಹಕನನ್ನು ಮಂಗಳೂರು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಬಸ್ ಕಂಡಕ್ಟರ್ ಬಾಗಲಕೋಟೆ ಮೂಲದ ಪ್ರದೀಪ್ (40) ಎಂಬಾತ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು,ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪೋಲಿ ಕಂಡಕ್ಟರ್‌ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ತಕ್ಷಣವೇ ಕಂಡಕ್ಟರ್‌ನನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.

 

 

 

 

 

 

 

 

 

Leave a Reply

Your email address will not be published. Required fields are marked *