Share this news

ಕಾರ್ಕಳ: ತಾಲೂಕಿನ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.ಕುಕ್ಕುಂದೂರು ನಿವಾಸಿ ಸುಂದರಿ(52ವ) ಮೃತಪಟ್ಟವರು.

ಇವರು ರಕ್ತದೊತ್ತಡ, ಎದೆನೋವು, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ವೈದ್ಯರಿಂದ ಚಿಕಿತ್ಸೆ ಪಡೆಯದೇ, ಮೆಡಿಕಲ್ ನಿಂದ ಔಷಧಿ ಪಡೆದುಕೊಳ್ಳುತ್ತಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ಅಸ್ವಸ್ಥಗೊಂಡವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಅವರು ಮೃಥಪಟ್ಟಿದ್ದರು.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *