ಕಾರ್ಕಳ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ತಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ.
ಉಡುಪಿ ತಾಲೂಕಿನ ಕೆರ್ಕಾಲ್ ಬೆಟ್ಟು ನಿವಾಸಿ ನಮನ್ (34) ಎಂಬವರು ಗುರುವಾರ ರಾತ್ರಿ 12:30 ಸುಮಾರಿಗೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಉಡುಪಿ ಕಡೆಗೆ ಹೋಗುತ್ತಿದ್ದಾಗ ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಬೈಕ್ ಸವಾರ ನಿರ್ಲಕ್ಷತನದಿಂದ ರಸ್ತೆಯ ಬಲಬದಿಗೆ ಬಂದು ನಮನ್ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಸವಾರರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











