Share this news

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಕ್ರಾಸ್ ಬಳಿ ಭಾನುವಾರ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಲ್ಕಿಯ ಪ್ರತೀಕ್ ಅವರು ಸ್ನೇಹಿತ ಕಿರಣ್ ಜೊತೆಗೆ ತಮ್ಮ ಬೈಕಿನಲ್ಲಿ ಕಾರ್ಕಳಕ್ಕೆ ಹೋಗುತ್ತಿದ್ದಾಗ ಹಾರ್ಜೆಡ್ಡು ಕ್ರಾಸ್ ಬಳಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬೈಕ್ ಸವಾರ ಪ್ರತೀಕ್‌ಗೆ ಗಂಭೀರ ಗಾಯಗಳಾಗಿದ್ದು, ಕಿರಣ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಕೂಡಲೇ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *