ಕಾರ್ಕಳ, ಸೆ 22: ಕಾರು ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೆ 22 ರಂದು ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಕಾರ್ಕಳ ಕುಕ್ಕುಂದೂರು ಅಯ್ಯಪ್ಪನಗರದ ಸಮೀಪ ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರು ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ವೇಳೆ ಚಾಲಕ ನಿದ್ದೆಮಂಪರಿನಲ್ಲಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಬಸ್ಸಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರು ಚಾಲಕನ ಮಾಹಿತಿ ತಿಳಿದು ಬಂದಿಲ್ಲ.