ಬೆಂಗಳೂರು : ಗ್ಯಾರಂಟಿ ಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆಗೆ ರಾಜ್ಯ ಮಹಿಳಾ ಆಯೋಗ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿತ್ತು.ಈ ನೋಟಿಸ್ ಗೆ ಹೈಕೋರ್ಟ್ ತಡೆ ನೀಡಿದ್ದು, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಇತ್ತೀಚಿಗೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿತ್ತು. ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ ಪ್ರಕರಣ ದಾಖಲಿಸಿಕೊಂಡಿತ್ತು.ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದು,ಈ ನೋಟಿಸಿಗೆ ಹೈಕೋರ್ಟ್ ತಡೆ ನೀಡಿದೆ.
ಈ ಪ್ರಕರಣದ ಕುರಿತು
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಮಾತನಾಡಿ , ‘ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ ಪರಿಣಾಮವಾಗಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗಿತ್ತು. ಈ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ತಿರುಚಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ