

ಕುಂದಾಪುರ, ಆ.21:ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣಕ್ಕಾಗಿ ಪೀಡಿಸುತ್ತಾರೆ ಎನ್ನುವ ದೂರಿನ ಹಿನ್ನಲೆಯಲ್ಲಿ ಭ್ರಷ್ಟಾಚಾರದ ಕುರಿತು ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಮಾಡಿದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವ ಗೂಂಡಾ ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಎಂಬಾತನನ್ನು ಆರೋಗ್ಯ ಇಲಾಖೆಯ ಆಯುಕ್ತರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶಿಸಿದ್ದಾರೆ.
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಆ.21 ರಂದು ಶುಕ್ರವಾರ ಬೆಳಗ್ಗೆ 9.45ರ ಸುಮಾರಿಗೆ ತನ್ನ ಪತ್ನಿಯ ಜೊತೆ ಹೊಟೇಲ್ ಶರೋನ್ ನಲ್ಲಿ ಚಹಾ ಕುಡಿಯಲು ಕುಳಿತ್ತಿದ್ದ ವೇಳೆ ಅಲ್ಲಿಗೆ ಬಂದ ಡಾ.ಮಹೇಂದ್ರ ಕುಮಾರ್ ಶೆಟ್ಟಿ ಏಕಾಎಕಿ ಶ್ರೀಕಾಂತ್ ಅವರ ಕಾಲರ್ ಹಿಡಿದು ಹಲ್ಲೆ ನಡೆಸಿ ಬಳಿಕ ಎಳೆದಾಡಿ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಶ್ರೀಕಾಂತ್ ದೂರು ನೀಡಿದ್ದು, ಈ ಎಲ್ಲಾ ದೃಶ್ಯಾವಳಿಗಳು ಹೊಟೇಲ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಘಟನೆ ನಡೆದ ತಕ್ಷಣವೇ ಆರೋಗ್ಯ ಸಚಿವ ಯು.ಟಿ ಖಾದರ್ ಅವರು ವೈದ್ಯನ ದುರ್ವರ್ತನೆಯನ್ನು ಖಂಡಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಇದಲ್ಲದೇ ಆತನ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಎಸ್ಪಿ ಕಚೇರಿಗೆ ದೂರು ನೀಡಲಾಗಿದೆ. ಇದಲ್ಲದೇ ತಕ್ಷಣವೇ ಅಮಾನತುಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಯವರಿಗೂ ದೂರು ನೀಡಲಾಗಿದೆ. ಈ ಪ್ರಕರಣ ನಡೆದ ಕೆಲವೇ ಗಂಟೆಗಳ ಒಳಗಾಗಿ ಅಶಿಸ್ತು, ಬೇಜವಾಬ್ದಾರಿ, ದುರ್ವರ್ತನೆ ಆರೋಪದಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಕಾರ್ಕಳದಲ್ಲಿ ಓಓಡಿ ನೆಲೆಯಲ್ಲಿ ಸೇವೆ: 59 ದಿನ ರಜೆಯಲ್ಲಿದ್ದ
ಹಲ್ಲೆ ಆರೋಪಿ ಡಾ.ಮಹೇಂದ್ರಕುಮಾರ್ ಶೆಟ್ಟಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತçಚಿಕಿತ್ಸರಾಗಿದ್ದು, ಓಓಡಿ ನೆಲೆಯಲ್ಲಿ ಇವರನ್ನು ಕಾರ್ಕಳ ಆಸ್ಪತ್ರೆಗೆ ನಿಯುಕ್ತಿಗೊಳಿಸಲಾಗಿತ್ತು. ಆದರೆ ಇವರು ಕಳೆದ ಆ.4 ರಿಂದ ಸೆ.30 ರವರೆಗೆ ವೈದ್ಯಕೀಯ ರಜೆಯಲ್ಲಿದ್ದಾರೆ. ರಜೆಯಿಲ್ಲಿದ್ದ ಡಾ.ಮಹೇಂದ್ರಕುಮಾರ್ ಶೆಟ್ಟಿ ಪತ್ರಕರ್ತ ಶ್ರೀಕಾಂತ್ ಮೇಲೆ ಹಲ್ಲೆ ನಡೆಸಿರುವುದು ಸರ್ಕಾರಿ ಅಧಿಕಾರಿಗೆ ತರವಲ್ಲದ ವರ್ತನೆ ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ನಡತೆ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬAದ ಹಿನ್ನಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಡಾ.ಮಹೇಂದ್ರಕುಮಾರ್ ಶೆಟ್ಟಿಯವರನ್ನು ಅಮಾನತು ಮಾಡಿ ಆರೋಗ್ಯ ಇಲಾಖೆಯ ಆಯುಕ್ತ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
