ಕಾರ್ಕಳ:ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಪಳ್ಳಿ ಕಡೆಯಿಂದ ಕಾರ್ಕಳ ಕಡೆಗೆ ಬೈಕ್ ಸವಾರ ಅತೀ ವೇಗವಾಗಿ ಬೈಕ್ ಚಲಾಯಿಸಿ ಕಲ್ಯಾ ಗ್ರಾಮದ ಕುಂಟಾಡಿ ಬಿಲ್ಲವ ಸಂಘದ ಸಭಾ ಭವನದ ಬಳಿ ಕಾರ್ಕಳ ಪಳ್ಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರವೀಂದ್ರ (68) ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ರವೀಂದ್ರ ಅ ವರ ಹಣೆ. ಕೈ. ಕಾಲುಗಳಿಗೆ ಗಾಯಗಳಾಗಿವೆ. ಗಾಯಾಳುವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ