ಉಡುಪಿ,ಆ.23: ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಜಿಲ್ಲಾ ಸೆಷನ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಹೇಶ್ ಶೆಟ್ಟಿಯವರನ್ನು ಶನಿವಾರ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ.