ಮಂಗಳೂರು :ಮಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ಮಣ್ಣು ಕುಸಿದು ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿರುವ ಘಟನೆ ಮಂಗಳೂರಿನ ಬಲ್ಮಠದಲ್ಲಿ ನಡೆದಿದೆ.
ಮಂಗಳೂರಿನ ನಗರದ ಬಲ್ಮಠದಲ್ಲಿನ ಖಾಸಗಿ ಕಟ್ಟಡ ನಿರ್ಮಾಣದ ಕಾಮಗಾರಿಯ ವೇಳೆ ಈ ಒಂದು ಘಟನೆ ನಡೆದಿದೆ. ಬಿಹಾರ ಮೂಲದ ಕಾರ್ಮಿಕರಾದ ಚಂದನ್ ಹಾಗೂ ರಾಜಕುಮಾರ್ ಎಂಬವರು ಮಣ್ಣಿನ ಅಡಿ ಸಿಲುಕಿದ ಕಾರ್ಮಿಕರು ಎಂದು ತಿಳಿದುಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಸುಮಾರು 20 ಅಡಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮೈ ಮೇಲೆ ಮಣ್ಣು ಬಿದ್ದಿದೆ ಎಂದು ಹೇಳಲಾಗುತ್ತಿದೆ. ತಕ್ಷಣ ಘಟನಾ ಸ್ಥಳಕ್ಕೆ ಎಸ್ ಡಿ ಆರ್ ಎಫ್ ತಂಡ ಭೇಟಿ ನೀಡಿದ್ದು ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.