ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 75ರ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದು ಬೆಂಗಳೂರು-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್ಗಳು ಬದಲಿ ಮಾರ್ಗ ಬಳಸಲು ಎಸ್ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಬುಧವಾರ ಮಧ್ಯಾಹ್ನದಿಂದ ತಡ ರಾತ್ರಿ ವರೆಗೆ ನಿರಂತರ ಮಳೆಯಾಗಿದ್ದು, ಉಳ್ಳಾಲಬೈಲ್ನ ಕೆಲ ಮನೆಗಳಿಗೆ ನೀರು ನುಗ್ಗಿದೆ. ಕುಂಪಲ ನಿಸರ್ಗ ಲೇಔಟ್ ಕೆಲ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರು ನಗರದ ಕೆಲವೆಡೆ ಗುಡ್ಡ ಕುಸಿತ ಸಂಭವಿಸಿದೆ. ನಗರ ಹೊರವಲಯದ ಅದ್ಯಪಾಡಿ – ಕೈಕಂಬ ಸಂಪರ್ಕಿಸುವ ರಸ್ತೆಮೇಲೆ ಮಣ್ಣು ಬಿದ್ದಿದೆ.