Share this news

ಕಾರ್ಕಳ: ಹೆಬ್ರಿ ತಾಲೂಕಿನ ಕಬ್ಬಿನಾಲೆಯ ತಿಂಗಳೆಮಕ್ಕಿ ಪೀತ್’ಬೈಲು ಎಂಬಲ್ಲಿನ ದಟ್ಟಕಾಡಿನಲ್ಲಿ ಸೋಮವಾರ ತಡರಾತ್ರಿ ANF ಪೊಲೀಸರು ಹೊಂಚುಹಾಕಿ ಓರ್ವ ನಕ್ಸಲ್ ಮುಖಂಡನನ್ನು ಹೊಡೆದುರುಳಿಸಿದೆ ಎನ್ನುವ ಮಾಹಿತಿ ಲಭಿಸಿದೆ.
ಈ ಎನ್’ಕೌಂಟರ್ ನಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಕೂಡ್ಲು ವಿಕ್ರಮ್ ಗೌಡ ಹತ್ಯೆಯಾಗಿದೆ ಎನ್ನಲಾಗುತ್ತಿದೆ.
ಸೋಮವಾರ ರಾತ್ರಿ ನಕ್ಸಲರ ಓಡಾಟದ ಕುರಿತು ರಹಸ್ಯ ಖಚಿತ ಮಾಹಿತಿ ಪಡೆದ ANF ಪೊಲೀಸ್ ಪಡೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಹೊಂಚುಹಾಕಿ ನಕ್ಸಲ್ ಬೇಟೆಯಾಡಿದೆ.
ನಕ್ಸಲ್ ಎನ್ ಕೌಂಟರ್ ಕುರಿತು ತಡರಾತ್ರಿ ಮಾಧ್ಯಮಗಳಿಗೆ ವದಂತಿಯಾಗಿದ್ದರೂ, ಈ ಘಟನೆ ಕುರಿತು ಪೊಲೀಸ್ ಇಲಾಖೆ ಈವರೆಗೂ ಘಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಹಾಗೂ ಅಧಿಕೃತವಾಗಿ ಖಚಿತಪಡಿಸಿಲ್ಲ.

ನಕ್ಸಲ್ ಚಟುವಟಿಕೆಗಳ ಸಂಬಂಧ ವಿಕ್ರಂ ಗೌಡ ಮೇಲೆ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿದ್ದವು.ವಿಕ್ರಂ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ. ಆ ಸಂದರ್ಭದಲ್ಲಿ ನಕ್ಸಲ್​ ಚಳವಳಿಗೆ ಧುಮುಕಿದ್ದ ವಿಕ್ರಂ ಗೌಡ, ನಂತರದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ನಕ್ಸಲ್ ಹೋರಾಟದ ವೇಳೆ ಕರಾವಳಿ ಭಾಗದಲ್ಲಿ ನೇತ್ರಾವತಿ ದಳವನ್ನು ಮುನ್ನೆಡೆಸಿದ್ದ. ಮತ್ತೊಂದೆಡೆ, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ ತಂಡ ಸಕ್ರಿಯವಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಹುಟ್ಟಿಕೊಂಡಿದ್ದ ನಕ್ಸಲ್ ಚಳುವಳಿ, ನಂತರ ಕರ್ನಾಟಕದ ವಿವಿಧ ಭಾಗಗಳಲ್ಲಿ ದಶಕಗಳ ಕಾಲ ಆತಂಕ ಸೃಷ್ಟಿ ಮಾಡಿತ್ತು. ಆದರೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಳವಳಿಗೆ ಹೆಚ್ಚಿನ ಬೆಂಬಲ‌ ಸಿಕ್ಕಿರಲಿಲ್ಲ. ಹೀಗಾಗಿ ಪಕ್ಕದ ರಾಜ್ಯ ಕೇರಳಕ್ಕೆ ನಕ್ಸಲರು ಸ್ಥಳಾಂತರಗೊಂಡಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *