

ಉಡುಪಿ, ಆ.25: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ತೆಂಕನಿಡಿಯೂರು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಮಿಲಿಂದ್ ಶೆಟ್ಟಿ ಹಾಗೂ ವೇದಾಂತ್ ಶಾನುಭಾಗ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
