ಹುಬ್ಬಳ್ಳಿ: ರಾಜ್ಯ ಸರ್ಕಾರ ಹಳೇ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದಿದ್ದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರ ಸಾಕಷ್ಟು ಆರೋಪ ಪ್ರತ್ಯಾರೋಪಗಳಿಗೂ ಕಾರಣವಾಗಿತ್ತು. ಈ ಮಧ್ಯೆ ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆಯುವ ತೀರ್ಮಾನ ಪ್ರಶ್ನಿಸಿ ಯುವ ವಕೀಲರ ತಂಡ ಹೈಕೋರ್ಟ್ನಲ್ಲಿ ರೀಟ್ ಅರ್ಜಿ ಸಲ್ಲಿಸಿದೆ.ಇದೀಗ ಈ ಕುರಿತು ಕಾರಣ ಕೇಳಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಗಿರೀಶ್ ಭಾರದ್ವಾಜ್ ಮತ್ತು ಶ್ರೀಧರ್ ಎನ್ನುವವರಿಂದ ಫೆ 16 ರಂದು ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನಲ್ಲಿ ಮಾರ್ಚ್ 17 ರಂದು ರೀಟ್ ಅರ್ಜಿ ವಿಚಾರಣೆ ನಡೆಸಲಿದೆ. ವೆಂಕಟೇಶ ದಳವಾಯಿ ಸರ್ಕಾರದ ವಿರುದ್ಧ ಹೈಕೋರ್ಟ್ನಲ್ಲಿ ವಾದ ಮಂಡಿಸಲಿದ್ದಾರೆ.
ಒಂದು ವಾಟ್ಸಪ್ ಸ್ಟೇಟಸ್‌ನಿಂದ ಹೊತ್ತಿಕೊಂಡಿದ್ದ ಬೆಂಕಿ ಅಂದು ರಾತ್ರಿ ದೊಡ್ಡ ಪ್ರಮಾಣದಲ್ಲಿ ಗಲಭೆಗೆ ಕಾರಣವಾಗಿತ್ತು. ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದು, ಪೊಲೀಸ್ ಠಾಣೆ ಮೇಲೆ ಗಲಭೆಕೋರರು ಕಲ್ಲು ಎಸೆದಿದ್ದರು.ಈ ಗಲಭೆಯಲ್ಲಿ ಭಾಗಿಯಾದ ಬರೋಬ್ಬರಿ 150 ಕ್ಕೂ ಹೆಚ್ಚು ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಆದರೆ ಇತ್ತೀಚೆಗೆ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಹಳೇ ಹುಬ್ಬಳ್ಳಿ ಗಲಭೆ ಸೇರಿ ಕೆಲ ಕೇಸ್‌ಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಿತ್ತು. ಸರ್ಕಾರದ ಈ ನಿರ್ಧಾರದ ವಿರುದ್ದ ರಾಜ್ಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.

K