ಬೆಳಗಾವಿ: ಅಂಗನವಾಡಿ ಕಾರ್ಯಕತೆರ್ಯರಿಗೆ ಇತ್ತೀಚೆಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಅವರ ಕೆಲಸದ ಒತ್ತಡವನ್ನು ಕಡಿಮೆ ಮಾಡುವಂತೆ ಸದಸ್ಯರು ಮನವಿ ಪತ್ರ ನೀಡಲು ಬಂದಿದ್ದರು. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಅಂಗನವಾಡಿ ಕಾರ್ಯಕರ್ತೆಯ ಜತೆ
ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅಂಗನವಾಡಿ ಕಾರ್ಯಕರ್ತರಿಗೆ ಕೆಲಸದ ಒತ್ತಡ ಜಾಸ್ತಿಯಾಗಿದೆ. ಇತ್ತೀಚೆಗೆ ಪಲ್ಸ್ ಪೊಲೀಯೋ, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ವೆ ಮಾಡಿದ್ದರು. ಈಗ ಬಿಎಲ್ಒ ಆಗಿ ಕೆಲಸ ಮಾಡ್ತಿದ್ದಾರೆ. ಬಿಎಲ್ಒ ಆಗಲು ನಮಗೆ ತೊಂದರೆ ಆಗುತ್ತಿದೆ ಎಂದ ಹೇಳಲು ಬಂದಿದ್ದಾರೆ.ಆದರೆ ನಾನು
ನಿಯಮ ಉಲ್ಲಂಘಿಸಿಲ್ಲ
ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲವೆಂದು ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.