
ಕಾರ್ಕಳ, , ಜು.5: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಅಜೆಕಾರು ಕೈಕಂಬದ ಶ್ರೀ ಮಹಾದೇವಿ ಭಜನಾ ಮಂಡಳಿ (ರಿ.) ಮಹಿಳಾ ಸದಸ್ಯರಿಗಾಗಿ ಕಾನೂನು ಮಾಹಿತಿ ಶಿಬಿರ ನಡೆಯಿತು.
ನ್ಯಾಯವಾದಿಗಳು ಹಾಗೂ ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಮಾತನಾಡಿ, ಮಹಿಳೆಯರ ಹಕ್ಕುಗಳು, ಕುಟುಂಬ ಸಂಬಂಧಿತ ಕಾನೂನುಗಳು, ಸೈಬರ್ ಅಪರಾಧಗಳು, ಆಸ್ತಿ ಹಕ್ಕು, ಮಹಿಳಾ ಸುರಕ್ಷತೆ ಹಾಗೂ ಪ್ರಸ್ತುತ ಕಾನೂನುಗಳ ಕುರಿತು ಸರಳ ಹಾಗೂ ಪರಿಣಾಮಕಾರಿ ಮಾಹಿತಿಯನ್ನು ನೀಡಿ, ಕಾನೂನು ಅರಿವು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವೆ, ಕಾನೂನು ಜಾಗೃತಿ ಹಾಗೂ ಜನಸಾಮಾನ್ಯರಿಗೆ ಉಚಿತ ಕಾನೂನು ಮಾರ್ಗದರ್ಶನದ ಮೂಲಕ ಸಲ್ಲಿಸುತ್ತಿರುವ ಸಮಾಜಮುಖಿ ಸೇವೆಯನ್ನು ಪರಿಗಣಿಸಿ, ಶ್ರೀ ಪದ್ಮಪ್ರಸಾದ್ ಜೈನ್ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
