Share this news

ಮಂಗಳೂರು: ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್‌ ಕುಮಾರ್‌ ಪುತ್ತೂರು ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಕಿಶೋರ್‌ ಕುಮಾರ್‌, ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ಅವಕಾಶ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಪಕ್ಷಕ್ಕೆ ಕಪ್ಪುಚುಕ್ಕಿ ಬರದಂತೆ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದರು.

ನನಗೆ ಟಿಕೆಟ್‌ ನೀಡುವ ಮೂಲಕ ಅತ್ಯಂತ ಸಣ್ಣ ಸಮುದಾಯವಾಗಿರುವ ಸವಿತಾ ಸಮಾಜಕ್ಕೆ ಬಿಜೆಪಿ ಮನ್ನಣೆ ನೀಡಿದೆ. ನನ್ನ ತಂದೆ ರಾಮಯ್ಯ ಭಂಡಾರಿ ಜನಸಂಘದಲ್ಲಿ ಕೆಲಸ ಮಾಡಿದವರು. ಚಿಕ್ಕಪ್ಪ ಸೇರಿದಂತೆ ಕುಟುಂಬದ ಅನೇಕರು ಆರೆಸ್ಸೆಸ್‌ ಕಾರ್ಯಕರ್ತರಾಗಿದ್ದರು ಎಂದು ಅವರು ತಿಳಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಕಚೇರಿ ಎದುರು ಕಾರ್ಯಕರ್ತರು ಹಾರ ಹಾಕಿ ಅಭ್ಯರ್ಥಿಯನ್ನು ಅಭಿನಂದಿಸಿದರು. ಚೆಂಡೆ ವಾದ್ಯ ಕಾರ್ಯಕರ್ತ ಜಯಘೋಷ ಮೊಳಗಿದವು.

ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌, ಬಿಜೆಪಿ ಮುಖಂಡ ಪ್ರಮೋದ್‌ ಮಧ್ವರಾಜ್‌ ಉಪಸ್ಥಿತರಿದ್ದರು.

 

 

 

 

Leave a Reply

Your email address will not be published. Required fields are marked *