Share this news

ಬೆಂಗಳೂರು: ಈಗಾಗಲೇ ಕೇರಳದಲ್ಲಿನ ಶಾಲೆಗಳಲ್ಲಿ ಅರ್ಧವೃತ್ತಾಕಾರದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೀಗ ಇದೇ ಮಾದರಿಯನ್ನು ಕರ್ನಾಟಕದ ಶಾಲೆಗಳಲ್ಲಿಯೂ ಜಾರಿ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮಕ್ಕಳ ಹಕ್ಕುಗಳ ಹೋರಾಟಗಾರರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಅರ್ಧವೃತ್ತಾಕಾರವಾಗಿ ಕುಳಿತುಕೊಳ್ಳುವ ವ್ಯವಸ್ಥೆಯು ಕಲಿಕೆಯ ಪರಿಣಾಮಕಾರಿತ್ವ ಹೆಚ್ಚಿಸಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂವಾದವನ್ನು ಸುಧಾರಿಸುವಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ. ಅರ್ಧವೃತ್ತಾಕಾರದ ವಿಧಾನದಲ್ಲಿ ಎಲ್ಲ ವಿದ್ಯಾರ್ಥಿಗಳೂ ಶಿಕ್ಷಕರಿಗೆ ಒಂದೇ ದೃಷ್ಟಿಯಲ್ಲಿ ಕಾಣಿಸುತ್ತಾರೆ. ಇದು ಸಮಾನತೆಯ ಭಾವನೆಯನ್ನು ಮೂಡಿಸುತ್ತದೆ ಮತ್ತು ಎಲ್ಲರಿಗೂ ಸಮಾನವಾಗಿ ಭಾಗವಹಿಸುವ ಅವಕಾಶವನ್ನು ಒದಗಿಸುತ್ತದೆ. ಹೀಗಾಗಿ ರಾಜ್ಯದ ಶಾಲೆಗಳಲ್ಲಿ ಈ ನಿಯಮ ಜಾರಿಗೆ ಒತ್ತಾಯ ಕೇಳಿ ಬಂದಿದೆ.

ಒಟ್ಟಿನಲ್ಲಿ ಶಾಲೆಗಳಲ್ಲಿ ತರಗತಿಗಳನ್ನು ಅರ್ಧವೃತ್ತಾಕಾರದ ವಿಧಾನಕ್ಕೆ ಸರಿಹೊಂದುವಂತೆ ಮರುವಿನ್ಯಾಸಗೊಳಿಸುವುದು ಸರ್ಕಾರಿ ಶಾಲೆಗಳಲ್ಲಿ ಸವಾಲಾಗಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಮುಂದಿನ ದಿನಗಳಲ್ಲಿ ಯಾವ ನಿರ್ಧಾರಕ್ಕೆ ಬರುತ್ತೆ ಎಂದು ಕಾದು ನೋಡಬೇಕಿದೆ.

ಕೇರಳದ ಶಾಲೆಗಳಲ್ಲಿ ಯಶಸ್ವಿಯಾಗಿ ಜಾರಿಯಾಗಿರುವ U ಆಕಾರದಲ್ಲಿ ಕುಳಿತುಕೊಳ್ಳುವ ವಿಧಾನವನ್ನು ಸದ್ಯ ಕರ್ನಾಟಕದ ಶಾಲೆಗಳಲ್ಲಿ ತರುವಂತೆ ಮಾತು ಕೇಳಿಬರುತ್ತಿದೆ. ಮಕ್ಕಳ ಹಕ್ಕುಗಳ ಹೋರಾಟಗಾರರು ಕರ್ನಾಟಕದ ಶಾಲೆಗಳಲ್ಲೂ ಈ ವಿಧಾನ ಜಾರಿಗೆ ಒತ್ತಾಯಿಸಿದ್ದಾರೆ. ಮಕ್ಕಳ ಹಕ್ಕುಗಳ ಆಯೋಗ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದೆ.

 

 

Leave a Reply

Your email address will not be published. Required fields are marked *