ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಸ್ಪೋಟಿಸಿ ಹತ್ಯೆ ಮಾಡಲಾಗುವುದೆಂದು ಅನಾಮಧೆಯ ವ್ಯಕ್ತಿಯೋರ್ವ ಬೆದರಿಕೆಯೊಡ್ಡಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 2 ರಂದು ಸಿಎಂ ಯೋಗಿ ಆದಿತ್ಯನಾಥ್ ಅವರ ಭದ್ರತೆಗೆ ನಿಯೋಜಿಸಲಾದ ಹೆಡ್ ಕಾನ್ಸ್ಟೆಬಲ್ಗೆ ಅನಾಮಧೇಯ ವ್ಯಕ್ತಿ ಬೆದರಿಕೆ ಕರೆ ಮಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಎಂದು ಹೇಳಿ ಕಾಲ್ ಕಟ್ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಝಡ್ ಪ್ಲಸ್ ಭದ್ರತೆ ಹೊಂದಿದ್ದು, ಈ ಬೆದರಿಕ ಕರೆಯ ಹಿನ್ನಲೆಯಲ್ಲಿ ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ.