ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಹತ್ಯೆ ಬೆದರಿಕೆ ಸಂದೇಶ ವಿಚಾರವಾಗಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಎನ್ಎಸ್ ಕಾಯ್ದೆ 196(1)(C), 353(2) ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.
ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್ ಪಂಪ್ವೆಲ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು.
ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು. ಪಂಪ್ವೆಲ್, ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಎಂದು ಪೋಸ್ಟ್ ಹರಿಬಿಡಲಾಗಿದೆ.ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದ ಕರಾವಳಿಯಲ್ಲಿ ಕೋಮು ಉದ್ವಿಗ್ನತೆ ಹೆಚ್ಚಾಗಿರುವ ಸಂದರ್ಭದಲ್ಲೇ ಇಂತಹ ಸಾಮಾಜಿಕ ಮಾಧ್ಯಮ ಸಂದೇಶಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ.