ಬೆಂಗಳೂರು : ಮುಡಾ ಸೈಟ್ ಹಂಚಿಕೆಯಲ್ಲಿ ಭಾರಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಸದನದ ಒಳಗಡೆ ಹಾಗೂ ಹೊರಗೆ ಹೋರಾಟ ತೀವೃಗೊಳಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ಕೂಡ ತಿರುಗಿಬಿದ್ದಿದೆಡೀ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಬಿಜೆಪಿ ಕಾಲದಲ್ಲಿ ಅಕ್ರಮವಾಗಿ ಮುಡಾ ಸೈಟು ಹಂಚಿಕೆ ಮಾಡಲಾಗಿದ್ದು, ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ
ಅಧಿವೇಶನದ ವೇಳೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಜೆಪಿಯವರು ಸದನ ಪ್ರಾರಂಭದ ದಿನವೇ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತಲ್ಲವೇ? ಅವರ ಹಗರಣಗಳು ಈಗ ಹೊರಗೆ ಬರುವ ಭಯದಿಂದ ಈಗ ಮಾತನಾಡುತ್ತಿದ್ದಾರೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ
ನಿಗಮ ಮಂಡಳಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಸದನದಲ್ಲಿ ನಾವು ಅವಕಾಶ ಕಲ್ಪಿಸಿದ್ದೆವು, ಆದರೆ ಅವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿAದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ಬಿಚ್ಚಿಟ್ಟರು. ಅವುಗಳು ಬಹಿರಂಗವಾಗಬಾರದು ಎಂದು ಮುಖ್ಯಮಂತ್ರಿಗಳ ಉತ್ತರಕ್ಕೆ ಅವಕಾಶ ನೀಡಲಿಲ್ಲ. ಈ ಅಕ್ರಮಗಳ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶ ನೀಡಿದೆ ಎಂದರು. ಬಿಜೆಪಿ ಶಾಸಕರ, ಸಚಿವರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬೊಮ್ಮಾಯಿ ಅವರ ಹಗರಣಗಳು ಹೊರಗೆ ಬರಲಿವೆ. ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಬಿಜೆಪಿ ಎಲ್ಲಾ ಹಗರಣಗಳ ಪಿತಾಮಹ. ಅವರ ಹಗರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಿವರವಾಗಿ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಅವರ ಹಗರಣಗಳು ಬಯಲಾಗುತ್ತವೆ ಎನ್ನುವ ಭಯದಿಂದ ಸದನದಲ್ಲಿ ಗದ್ದಲ ಎಬ್ಬಿಸಿ ನಮ್ಮನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಕಾಲದ ಎಲ್ಲಾ ಅಕ್ರಮಗಳನ್ನು ತೆಗೆಯುತ್ತಿದ್ದೇವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
`