ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ದೂರಿನ ಮೇರೆಗೆ ಬೆಂಗಳೂರಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈ ಪ್ರಕರಣ ರದ್ದು ಕೋರಿ ಕುಮಾರಸ್ವಾಮಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಈ ಮೂಲಕ ಕುಮಾರಸ್ವಾಮಿಗೆ ಈಗ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.
ಪ್ರಕರಣ ರದ್ದು ಕೋರಿ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರನ್ನು ಕಳಿಸಿ ಬಂಧಿಸಲು ಯತ್ನಿಸುತ್ತಿದ್ದಾರೆ. 10 ವರ್ಷದ ಹಿಂದಿನ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಯತ್ನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದರು.
ಈ ವಾದ ಆಲಿಸಿದ ಹೈಕೋರ್ಟ್, ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದ. ಅಲ್ಲದೇ ಎಫ್‌ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ನಿರ್ಬಂಧಿಸಿದೆ. ಇನ್ನು ಬಲವಂತದ ಕ್ರಮ ಕೈಗೊಳ್ಳುವುದಿಲ್ಲವೆಂಬ SPP ಹೇಳಿಕೆಯನ್ನೂ ಸಹ ಹೈಕೋರ್ಟ್ ದಾಖಲಿಸಿಕೊಂಡಿದೆ.
ಸೆಪ್ಟೆAಬರ್ 29ರಂದು ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಆನಂತರ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರು ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕ್ಕೆ ಆಗ್ರಹಿಸಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರ ದೂರಿನಲ್ಲಿ ವಿವರಿಸಿದ್ದರು.