Share this news

ಬೆಂಗಳೂರು, ನ.18: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಬಾಗಲಕೋಟೆ, ಹಾಸನ,ಹುಬ್ಬಳ್ಳಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿವೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕು ಪಂಚಾಯತ್ ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಸಂಜೀವ ಹಿಪ್ಪರಗಿ ಅವರಿಗೆ ಸೇರಿದ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲತಃ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದವರಾದ ಸಂಜೀವ ಹಿಪ್ಪರಗಿ, ಈ ಹಿಂದೆ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗ ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಜಮಖಂಡಿ ನಗರದ ಮೈಗೂರು ರಸ್ತೆ ಹಾಗೂ ವಿಜಯನಗರದಲ್ಲಿರುವ ಅವರಿಗೆ ಸೇರಿದ ಎರಡು ಪ್ರತ್ಯೇಕ ಮನೆಗಳಲ್ಲಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ಇತ್ತ ಹಾಸನ ಜಿಲ್ಲೆಯಲ್ಲೂ ಲೋಕಾಯುಕ್ತ ಕಾರ್ಯಾಚರಣೆ ಮುಂದುವರಿದಿದ್ದು, ಸಕಲೇಶಪುರ ವಲಯದ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಅವರ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೇಮಂತ್ ಕುಮಾರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆಯ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಅದೇ ರೀತಿ ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಡಿವೈಎಸ್‌ಪಿ ಕಲಾವತಿ ಅವರ ನೇತೃತ್ವದ ತಂಡ ಇಬ್ಬರು ಅಧಿಕಾರಿಗಳ ಮನೆಗಳಿಗೆ ಲಗ್ಗೆ ಇಟ್ಟಿದೆ. ಚಿತ್ರದುರ್ಗದ ಚಳ್ಳಕೆರೆ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ ಅವರ ನಿವಾಸ ಹಾಗೂ ವಿದ್ಯಾನಗರದಲ್ಲಿರುವ ತೂಕ ಮತ್ತು ಅಳತೆ ಇಲಾಖೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಆಸ್ತಿಪಾಸ್ತಿ ಹಾಗೂ ಬ್ಯಾಂಕ್ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿ ಕೂಡ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಓWಏSಖಖಿಅ ಬಸ್ ಚಾಲಕ ಹಾಗೂ ನಿರ್ವಾಹಕ ಷಡಕ್ಷರಯ್ಯ ಮನೆಯ ಮೇಲೆ ದಾಳಿ ಮಾಡಿದ್ದಾರೆ ನಿಗದಿಯ ಆದಾಯಕ್ಕಿಂತಲೂ ಅಧಿಕ ಆಸ್ತಿಗಳಿಗೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಹುಬ್ಬಳ್ಳಿಯ ಗಾಂಧಿ ನಗರದಲ್ಲಿರುವ ಷಡಕ್ಷರಯ್ಯ ಮನೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.

 

 

 

.

 

.

.

.

 

 

 

 

 

 

 

 

 

 

 

 

 

.

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *