
ಉಡುಪಿ, ಮಾ.16: ಚಾಲಕನ ನಿಯಂತ್ರಣ ತಪ್ಪಿ ಎಲ್‌ಪಿಜಿ ಗ್ಯಾಸ್ ಸಾಗಾಟದ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂದು ಪರಿಶೀಲಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿಯಲ್ಲಿ ಸುಮಾರು ಅರ್ಧತಾಸು ವಾಹನ ಸಂಚಾರ ತಡೆ ಹಿಡಿಯಲಾಯಿತು. ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾದ ಹಿನ್ನಲೆಯಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ.


.
.
.
.
.
.
.
.
.
.
