
ಮುಂಬೈ, ಜ. 28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಅವರ ಜತೆ ವಿಮಾನದಲ್ಲಿದ್ದ ಐವರು ಪ್ರಾಣ ಕಳೆದುಕೊಂಡಿದ್ದಾರೆ.
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ಕಳೆದುಕೊಂಡು ಕ್ರ್ಯಾಶ್ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದ್ದು ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಉಳಿದ ಐವರೂ ಮೃತಪಟ್ಟಿದ್ದಾರೆ.
2025 ರ ವಿಧಾನಸಭಾ ಚುನಾವಣೆಯಲ್ಲಿ, ಅವರು ಯುಗೇಂದ್ರ ಪವಾರ್ ಅವರನ್ನು ಸೋಲಿಸಿ ಗೆದ್ದಿದ್ದರು. ಇದಕ್ಕೂ ಮೊದಲು, ಅಜಿತ್ ಪವಾರ್ ಮಹಾರಾಷ್ಟ್ರ ರಾಜಕೀಯದಲ್ಲಿ ಅತ್ಯಂತ ಶಕ್ತಿಶಾಲಿ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. ಅಜಿತ್ ಪವಾರ್ ತಮ್ಮ ರಾಜಕೀಯ ಚಾಣಾಕ್ಷತನದ ಮೂಲಕ ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸಿದರು. ಆದರೆ, ಆದರೆ ಅವರು ತನ್ನ ಚಿಕ್ಕಪ್ಪನನ್ನು ಬಿಟ್ಟು, ಎನ್ಸಿಪಿಯನ್ನು ತೊರೆದು ಎನ್ಡಿಎ ಅಂದರೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಸೇರಿದ್ದರುವರ್ಷಗಳ ಕಠಿಣ ಪರಿಶ್ರಮದ ನಂತರ, ಅವರು ಮಹಾರಾಷ್ಟ್ರ ರಾಜಕೀಯದಲ್ಲಿ ಬಲವಾದ ನೆಲೆಯನ್ನು ಸ್ಥಾಪಿಸಿದರು. 1995 ರಲ್ಲಿ, ಅವರು ಮೊದಲು ಪುಣೆ ಜಿಲ್ಲೆಯ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆಯ (ಎಂಎಲ್ಎ) ಸದಸ್ಯರಾದರು. ಅಂದಿನಿಂದ ಅವರು ನಿರಂತರವಾಗಿ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1995, 1999, 2004, 2009, 2014 ಮತ್ತು 2019 ರಲ್ಲಿ ಅವರು ಶಾಸಕ ಚುನಾವಣೆಯಲ್ಲಿ ಗೆದ್ದರು.
ಅಜಿತ್ ಪವಾರ್ ಮೊದಲು ನವೆಂಬರ್ 2010 ರಲ್ಲಿ ಉಪಮುಖ್ಯಮಂತ್ರಿಯಾದರು. ನಂತರ 2010 ರಲ್ಲಿ ಎರಡನೇ ಬಾರಿಗೆ ಉಪಮುಖ್ಯಮಂತ್ರಿಯಾದರು. ಅವರು ಪತ್ನಿ ಸುನೇತ್ರಾ ಪವಾರ್, ಮಕ್ಕಳಾದ ಜೈ ಪವಾರ್ ಮತ್ತು ಪಾರ್ಥ್ ಪವಾರ್ ಎಂಬ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

.
.
.
.
