

ಕೊಲ್ಕೊತ್ತಾ,ಸೆ.30: .ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲಿ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಸೇರಿಸು ಸಲುವಾಗಿ ಬಾಂಗ್ಲಾದೇಶ ಉಗ್ರರು ‘ಪೂರ್ವ ಆಕಾಶ್’ ಎಂಬ ಟೆಲಿಗ್ರಾಂ ಗ್ರೂಪ್ ಮೂಲಕ ಭಾರತದ ಯುವಕರನ್ನು ಆನ್‌ಲೈನ್‌ನಲ್ಲಿ ಸದ್ದಿಲ್ಲದೆ ತೀವ್ರಗಾಮಿಗಳನ್ನಾಗಿ ಪರಿವರ್ತಿಸುತ್ತಿದ್ದರು. ದೇಶ ವಿರೋಧಿ ಪ್ರಚಾರ ನಡೆಸುವುದು, ರಹಸ್ಯ ಸಭೆಗಳನ್ನು ಆಯೋಜಿಸುವುದು ಹಾಗೂ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ಭಾರತದಲ್ಲಿ ಉಗ್ರ ಜಾಲವನ್ನು ವಿಸ್ತರಿಸುವ ಬೃಹತ್ ಸಂಚನ್ನು ಇವರು ರೂಪಿಸಿದ್ದರು. ಆ ಮೂಲಕ ದೇಶಾದ್ಯಂತ ಭಾರೀ ಪ್ರಮಾಣದ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಬಾಂಗ್ಲಾದೇಶದ ಉಗ್ರ ಸಂಘಟನೆಯಾದ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಸಂಘಟನೆಯ 13 ಭಯೋತ್ಪಾದಕರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ತನಿಖೆಯನ್ನು ತೀವ್ರಗೊಳಿಸಿರುವ ಅಧಿಕಾರಿಗಳು ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳದ ಒಟ್ಟು 16 ವಿವಿಧ ಪ್ರದೇಶಗಳಲ್ಲಿ ಏಕಕಾಲಕ್ಕೆ ಮಿಂಚಿನ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮೊಬೈಲ್ ಫೋನ್‌ಗಳು ಹಾಗೂ ಪೆನ್‌ಡ್ರೈವ್‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಹಿಂದೆ 2025ರ ಡಿಸೆಂಬರ್‌ನಲ್ಲಿ ಅಸ್ಸಾಂ ಪೊಲೀಸರು ಇದೇ ಪ್ರಕರಣಕ್ಕೆ ಸಂಬAಧಿಸಿದAತೆ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ 11 ಜನರನ್ನು ಬಂಧಿಸಿದ್ದರು. ತದನಂತರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ತನ್ನ ವಶಕ್ಕೆ ಪಡೆದ , ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ. ಬಾಂಗ್ಲಾದೇಶ ಮೂಲದ ಈ ಉಗ್ರ ಸಂಘಟನೆಯು ಭಾರತದಾದ್ಯಂತ ತನ್ನ ಜಾಲವನ್ನು ವಿಸ್ತರಿಸುವ ಬೃಹತ್ ಸಂಚು ರೂಪಿಸಿತ್ತು ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಬಹಿರಂಗಗೊAಡಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳು ಜಾಲದ ಉಳಿದ ಕೊಂಡಿಗಳನ್ನು ಪತ್ತೆಹಚ್ಚಲು ಕಾರ್ಯಾಚರಣೆ ಮುಂದುವರಿಸಿವೆ.





.
.
.
.
.
.
.
.
.
.
.
.
.
.
.
.
.
.
.
.
